1. ಸುದ್ದಿಗಳು

ಭಾರೀ ಮಳೆ ಅಲರ್ಟ್‌: ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

Maltesh
Maltesh
Weather Report: Rain Alert in this districts

20 ನೇ ಜೂನ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು:  ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು  ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು  ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ಇಲ್ಲ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ  30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ  ಗುಡುಗು ಮಿಂಚಿನ ಸಾಧ್ಯತೆ ಇದೆ.

ನಿಮ್ಮ ಅಕೌಂಟ್‌ಗೆ ಪಿಎಂ ಕಿಸಾನ್‌ 14 ನೆ ಕಂತು ಬರುತ್ತದೆಯೇ? ಈಗಲೇ ತಿಳಿದುಕೊಳ್ಳಿ

ಮುಂದಿನ 48 ಘಂಟೆಗಳು: ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ  30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶದ ಮುನ್ಸೂಚನೆ:

ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ರಾಜ್ಯದ ಒಂದೆರಡು ಕಡೆಗಳಲ್ಲಿ 4-5  ಹಾಗೂ ಕೆಲವು ಕಡೆಗಳಲ್ಲಿ 3-4 ಡಿಗ್ರಿ ಸೆಲ್ಷಿಯಸ್ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

20 ನೇ ಜೂನ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ  ಮೋಡ ಕವಿದ ವಾತಾವರಣವಿರುತ್ತದೆ.  ಸಂಜೆ ಅಥವ  ರಾತ್ರಿಯ ವೇಳೆಗೆ ಹಗುರದಿಂದ ಸಾದಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

Free Smartphones : ಮಹಿಳೆಯರಿಗೆ ಸ್ಮಾರ್ಟ್‌ ಫೋನ್‌ ಖರೀದಿಗೆ ಹಣ

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ  ಮೋಡ ಕವಿದ ವಾತಾವರಣವಿರುತ್ತದೆ.  ಸಂಜೆ ಅಥವ  ರಾತ್ರಿಯ ವೇಳೆಗೆ ಹಗುರದಿಂದ ಸಾದಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

- Meteorological Centre Bangalore

Published On: 19 June 2023, 09:35 AM English Summary: Weather Report: Rain Alert in this districts

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.