ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಮಲೆನಾಡಿನ ಪ್ರದೇಶಗಳಲ್ಲಿ ಮಳೆ ಹಾಗೂ ಮೋಡ ಕವಿದ ವಾತಾವರಣ ಕಂಡುಬಂದರೆ,
ಉತ್ತರ ಒಳನಾಡಿನ ಹಲವು ಭಾಗದಲ್ಲಿ ನೆತ್ತಿ ಸುಡುವ ಬಿಸಿಲು ಇದೆ.
ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಎರಡು ವೈರುಧ್ಯವಾದ ವಾತಾವರಣಗಳು ಏಕಕಾಲಕ್ಕೆ ಕಂಡುಬರುತ್ತಿದೆ.
ಭಾರೀ ತಾಪಮಾನ ಎಚ್ಚರಿಕೆ ವಹಿಸಿ: ರಾಜ್ಯದ ಉತ್ತರ ಕರ್ನಾಟಕದ ರಾಯಚೂರು, ಬಾಗಲಕೋಟೆ, ಯಾದಗಿರಿ ಸೇರಿದಂತೆ
ಹಲವು ಭಾಗದಲ್ಲಿ ತೀವ್ರವಾದ ಬಿಸಿಲಿನ ಝಳ ಇರಲಿದ್ದು, ಎಚ್ಚರಿಕೆ ವಹಿಸುವಂತೆ ಕರ್ನಾಟಕ ರಾಜ್ಯ ನೈಸರ್ಗಿ ವಿಕೋಪ ಉಸ್ತುವಾರಿ ಎಚ್ಚರಿಕೆಯನ್ನು ನೀಡಿದೆ.
ಅಲ್ಲದೇ ಮೇ 20ರ ವರೆಗೆ ಉತ್ತರ ಕರ್ನಾಟಕದ ಭಾಗದಲ್ಲಿ ತೀವ್ರವಾದ ಬಿಸಿಲಿನ ಝಳ ಇರಲಿದ್ದು, ಎಚ್ಚರಿಕೆ ವಹಿಸಲು ನಿರ್ದೇಶನ ನೀಡಲಾಗಿದೆ.
ಬಿಸಿಲಿನ ಝಳ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೈಸರ್ಗಿ ವಿಕೋಪ ಉಸ್ತುವಾರಿ ಕೇಂದ್ರ ರಾಜ್ಯದ ಜನತೆಗೆ ಎಚ್ಚರಿಕೆಯನ್ನು ನೀಡಿದೆ.
“ಹಿಂದಿನ 3 ದಿನಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿದ್ದು, ಮುಂದಿನ 3 ದಿನಗಳಲ್ಲಿ ಗರಿಷ್ಠ ತಾಪಮಾನವು 40 ಡಿಗ್ರಿ
ಸೆಲ್ಸಿಯಸ್‌ಗಿಂತ ಹೆಚ್ಚು ಮುಂದುವರಿಯುವ ಸಾಧ್ಯತೆ ಇದೆ. ದಯವಿಟ್ಟು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಿ”
ಎಂದು ಎಂದು ಕೆಎಸ್‌ಎನ್‌ಡಿಎಂಸಿ ( ಕರ್ನಾಟಕ ರಾಜ್ಯ ನೈಸರ್ಗಿ ವಿಕೋಪ ಉಸ್ತುವಾರಿ ಕೇಂದ್ರ) ಸಂದೇಶ ರವಾನಿಸಿದೆ.
ದಕ್ಷಿಣ ಭಾಗದಲ್ಲಿ ಮಳೆ: ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರ ಬಿಸಿಲು ಕಾಣಿಸಿಕೊಳ್ಳುತ್ತಿರುವ
ಸಂದರ್ಭದಲ್ಲಿಯೇ ರಾಜ್ಯದ ದಕ್ಷಿಣ ಕರ್ನಾಟಕದ ಭಾಗದಲ್ಲಿ ಮಳೆ ಆಗುತ್ತಿದೆ.
ಕಳೆದ 24 ಗಂಟೆಯ ಅವಧಿಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.
ಇನ್ನು ಕೊಡಗಿನಲ್ಲಿ 3 ಸೆಂ.ಮೀ ಮಳೆಯಾಗಿದೆ.
ಇನ್ನು ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶವು 40.7 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ
ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಮೇ 20ರ ವರೆಗೆ ರಾಜ್ಯದಲ್ಲಿ ಹವಾಮಾನ ಮುನ್ಸೂಚನೆ: ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ,
ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳು ಮತ್ತು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ
ಒಣಹವೆ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಉಳಿದಂತೆ ಭಾರೀ ಮಳೆ ಅಥವಾ ಗುಡುಗು ಮುನ್ನೆಚ್ಚರಿಕೆ ಇಲ್ಲ.
ಗರಿಷ್ಠ ತಾಪಮಾನದ ಮುನ್ಸೂಚನೆ
ಗರಿಷ್ಠ ಉಷ್ಣಾಂಶವು ರಾಜ್ಯದಾದ್ಯಂತ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ
ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಉಷ್ಣಾಂಶವು 35 ಡಿಗ್ರಿ ಸೆಲ್ಸಿಯಸ್
ಹಾಗೂ ಕನಿಷ್ಠ ಉಷ್ಣಾಂಶವು 24 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Pic Credits: pexels