ರಾಜ್ಯದಲ್ಲಿ ಇಂದು ಕೂಡ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆಯೆಂದು ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ.
ಇದನ್ನೂ ಓದಿರಿ: PM ಫಸಲ್ ಬಿಮಾ ಯೋಜನೆ: 5 ವರ್ಷದಲ್ಲಿ ಬರೋಬ್ಬರಿ ₹40,000 ಕೋಟಿ ಗಳಿಸಿದ ವಿಮಾ ಕಂಪನಿಗಳು! ಆದರೆ ರೈತರಿಗೆಷ್ಟು?
ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇನ್ನು 2 ದಿನ ಮಳೆಯಾಗಲಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕೂಡ ತಿಳಿಸಿದೆ.
ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಯ ಒಂದೆರಡು ಕಡೆ ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಗುಜರಾತ್‌ನಲ್ಲಿ ಸಾವಿರಾರು ಹಸುಗಳಿಗೆ ಕಾಣಿಸಿಕೊಂಡ ಚರ್ಮ ರೋಗ! ನಿಮ್ಮ ಹಸುಗಳಿಗೆ ಈ ಲಕ್ಷಣಗಳಿವೆಯೆ ಗಮನಿಸಿ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಮುಂದಿನ 48 ಗಂಟೆಗಳು ಹವಾಮಾನದಲ್ಲಿ ಗಮನಾರ್ಹವಾದ ಬದಲಾವಣೆಯಿಲ್ಲ ಎಂದು ಇಲಾಖೆ ಹೇಳಿದೆ.
ಜುಲೈ 24 ಮತ್ತು 25 ರಂದು ಗುಜರಾತ್ನ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತದೆ ಎಂದು ಐಎಂಡಿ ಮಾಹಿತಿ ನೀಡಿದೆ.
ಗುಡ್‌ನ್ಯೂಸ್: ರೈತ ಕುಟುಂಬಗಳ ವಾರ್ಷಿಕ ಆದಾಯ ₹10,218ಕ್ಕೆ ಏರಿಕೆ! NSS ಸಮೀಕ್ಷಾ ವರದಿ..
ಸೌರಾಷ್ಟ್ರ ಮತ್ತು ಕಚ್ನಲ್ಲಿ ಭಾರೀ ಮಳೆಯಾಗುತ್ತದೆ, ಜುಲೈ 24ರಿಂದ 28ರವರೆಗೆ ಆಂಧ್ರ ಪ್ರದೇಶದ ಕರಾವಳಿ ಭಾಗಗಳು ಮತ್ತು ಯಾನಂ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತೆಲಂಗಾಣದಲ್ಲಿ ಮುಂದಿನ 4 ದಿನಗಳು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.