News

ಧಾರವಾಡ ಹಾವೇರಿಯಲ್ಲಿ ಧಾರಾಕಾರ ಮಳೆ, ರಾಜ್ಯದ ಉಳಿದೆ ಸಾಧಾರಣ ಮಳೆ

15 July, 2020 10:45 AM IST By:

ರಾಜ್ಯದ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಎಲ್ಲೆಡೆ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಸಾಧಾರಣ ಮಳೆಯಾಯಿತು. ಬಳ್ಳಾರಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಚುರುಕು ಪಡೆದಿದ್ದು, ರಾಜ್ಯದ ಉಳಿದೆಡೆ ಸಾಧಾರಣವಾಗಿ ಸುರಿದಿದೆ.

ಕೊಡಗು ಜಿಲ್ಲೆಯಲ್ಲಿ ಚುರುಕು ಪಡೆದಿರುವ ಮಳೆ ಮಡಿಕೇರಿ, ಭಾಗಮಂಡಲ, ನಾಪೋಕ್ಲು, ತಲಕಾವೇರಿ, ಚೇರಂಬಾಣೆ ವ್ಯಾಪ್ತಿಯಲ್ಲಿ ನಿರಂತರವಾಗಿ ಸುರಿಯುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ದಾವಣಗೆರೆ ಜಿಲ್ಲೆಯಯಲ್ಲಿ ಸಾಧಾರಣ ಮಳೆ ಆಗಿದೆ. ಕೊಡಗಿನಲ್ಲಿ ಮತ್ತೆ ಮಳೆ ಚುರುಕಾಗಿದೆ.

ವಿವಿಧೆಡೆ ಸುರಿದ ಮಳೆ ಪ್ರಮಾಣ:

ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ಗರಿಷಅಠ 7 ಸೆಂ.ಮೀಟ, ಉಡುಪಿ 6, ಕೋಟ, ಕಾರ್ಕಳ, ಆಗುಂಬೆ ತಲಾ 5, ಪಣಂಬೂರು, ಸುಬ್ರಹ್ಮಣ್ಯ, ಕೊಲ್ಲೂರು, ಕುಂದಾಪುರ, ಸಿದ್ದಾಪುರ, ಶಿರಾಲಿ, ಹೊನ್ನಾವರ ತಲಾ 4, ಮೂಡುಬಿದಿರೆ, ಮೂಲ್ಕಿ, ಬಜಪೆ, ಬೆಳ್ತಂಗಡಿ, ಮಾಣಿ, ಪುತ್ತೂರು, ಕಾರವಾರ, ಶಿಕಾರಿಪುರ ತಲಾ 3, ಮಂಗಳೂರು, ಸುಳ್ಯ, ಭಟ್ಕಳ, ಗೋಕರ್ಣ,ಶ್ರವಣಬೆಳಗೊಳ, ಹಿರೇಕೇರೂರ, ಕುಮಟಾ, ಅಂಕೋಲಾ, ಭಾಗಮಂಡಲ, ತೀರ್ಥಹಳ್ಳಿ, ಶೃಂಗೇರಿ ತಲಾ 2, ಧರ್ಮಸ್ಥಳ, ಉಪ್ಪಿನಂಗಡಿ, ಮೂರ್ನಾಡು, ಲಿಂಗನಮಕ್ಕಿ, ಸಾಗರ, ಅರಸಾಳು, ಹುಂಚದಕಟ್ಟೆ, ಕಳಸ, ಜಯಪುರ,ರಾಯಚುರು, ಸೊರಬ, ನಾಗಮಂಗಲ, ಕಮ್ಮರಡಿ, ಕೊಪ್ಪ ತಲಾ 1 ಸೆಂ. ಮೀ. ಮಳೆಯಾಗಿದೆ.

ಅರಬ್ಬಿ ಸಮುದ್ರದ ಪೂರ್ವ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಜುಲೈ 15 ಮತ್ತು 16ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.