ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ತೊರೆಯುವ ನಾಯಕರ ಪಟ್ಟಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇತ್ತ ಕಾಂಗ್ರೆಸ್ ಮುಖಂಡು ಮುಂಬರುವ ಲೋಕಸಭಾ ಚುನಾವಣೆಗೆ ಕಾರ್ಯತಂತ್ರವನ್ನು ರೂಪಿಸುತ್ತಿದ್ದರೆ, ಇತ್ತ ನಾಯಕರು ರಾಜೀನಾಮೆ ಪತ್ರ ಸಲ್ಲಿಸುತ್ತಿದ್ದಾರೆ.
ಪಶ್ಚಿಮ ಬಂಗಾಳ ರಾಜ್ಯದ ಏಕೈಕ ಕಾಂಗ್ರೆಸ್ ಶಾಸಕ ಬೇರೊನ್ ಬಿಸ್ವಾಸ್ ಅವರು, ನಿನ್ನೆ ಕಾಂಗ್ರೆಸ್ ಪಕ್ಷವನ್ನು ತೊರೆದು ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಪಶ್ಚಿಮ ಬಂಗಾಳದಲ್ಲಿ ಶಾಸಕನಾಗಿ ಆಯ್ಕೆಯಾಗಿದ್ದ ಏಕೈಕ ಕಾಂಗ್ರೆಸ್ ಶಾಸಕ ಇವರಾಗಿದ್ದಾರೆ. ಸದ್ಯ ಇವರ ಈ ರಾಜೀನಾಮೆಯಿಂದ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿದಂತಾಗಿದೆ.
ತೃಣಮೂಲ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಬಿಸ್ವಾಸ್ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಿಕೊಂಡರು.ಈ ಸಂದರ್ಭದಲ್ಲಿ ಮಾತನಾಡಿದ ಬಿಸ್ವಾಸ್, ಉಪಚುನಾವಣೆಯಲ್ಲಿ ತಮ್ಮ ಗೆಲುವಿನ ಹಿಂದೆ ಕಾಂಗ್ರೆಸ್ ಕೊಡುಗೆ ಇಲ್ಲ. "ನಾನು ಎಂದಿಗೂ ಕಾಂಗ್ರೆಸ್‌ನೊಂದಿಗೆ ಇರಲಿಲ್ಲ, ಸಾಗರದಿಘಿ ಜನರಿಗಾಗಿ ನಾನು ಕಾಂಗ್ರೆಸ್‌ನಲ್ಲಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ಅದೇ ಸಮಯದಲ್ಲಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ನಿಜವಾಗಿಯೂ ವಿರೋಧಿಸುತ್ತಿರುವ ಏಕೈಕ ಪಕ್ಷ ತೃಣಮೂಲ ಎಂದು ನಾನು ಭಾವಿಸುತ್ತೇನೆ. ಹಾಗಾಗಿ ನಾನು ತೃಣಮೂಲಕ್ಕೆ ಸೇರಿದೆ ಎಂದು ಬಿಸ್ವಾಸ್ ಹೇಳಿದ್ದಾರೆ.