ಬೆಳೆ ನಷ್ಟ, ಬೆಳೆ ವಿಫಲಗೊಂಡ ಸಂದರ್ಭದಲ್ಲಿ ನಷ್ಟ ಹೊಂದಿದ ರೈತರ ಕೈಹಿಡಿಯಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಕೇಂದ್ರ ಸರ್ಕಾರದ ಸಹಭಾಗೀತ್ವದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಿದೆ.
2020-21 ನೇ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಈಗಾಗಲೇ (PMFBY) ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಹಿಂಗಾರು ಹಂಗಾಮಿನಲ್ಲಿ ನಿರ್ಧಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ ಮತ್ತು ಬೆಳೆ ಮುಳುಗಡೆ ಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು.
ಒಂದು ವೇಳೆ ಒಂದು ಅಧಿಸೂಚಿತ ಘಟಕದಲ್ಲಿ ಶೇಕಡಾ 25 ಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ಬೆಳೆ ನಷ್ಟವಾದರೆ ಆ ಅಧಿಸೂಚಿತ ಘಟಕದಲ್ಲಿ ಬೆಳೆ ವಿಮೆಗೆ ಒಳಪಟ್ಟ ರೈತರಲ್ಲಿ ಬೆಳೆ ನಷ್ಟವಾದ ರೈತರಿಗೆ ಮಾತ್ರ ಮಾದರಿ ಸಮೀಕ್ಷೆಗನುಣವಾಗಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುವುದು.
ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ವಿಮಾ ಸಂಸ್ಥೆಯ ಕಚೇರಿಗಳಿಗೆ 48 ಗಂಟೆಯೊಳಗೆ ಮಾಹಿತಿ ನೀಡಬೇಕು. ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು, ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣವನ್ನು 48 ಗಂಟೆಗಳೊಳಗಾಗಿ ತಿಳಿಸಿದಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು.
ಇದನ್ನೂ ಓದಿ:ರೈತರೇ.. ನಿಮ್ಮ ಮೊಬೈಲ್‌ನಲ್ಲೇ ಬೆಳೆ ಸಮೀಕ್ಷೆ ನಡೆಸಿ
ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ಪಹಣಿ/ಖಾತೆ ಪುಸ್ತಕ, ಪಾಸ್ ಪುಸ್ತಕ ಮತ್ತು ಕಂದಾಯ ರಸೀದಿಯನ್ನು ನೀಡಬೇಕು. ಫ್ಯೂಚರ್ ಜನರಲಿ ಜನರಲ್ ಇನ್ಸೂರೆನ್ಸ್ ಕಂಪನಿ ಅವರನ್ನು ನೋಡಲ್ ಏಜೆನ್ಸಿಯನ್ನಾಗಿ ಜಿಲ್ಲೆಗೆ ಆಯ್ಕೆ ಮಾಡಲಾಗಿದೆ. ಮಾಹಿತಿಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಬೆಳೆಸಾಲ ಮಂಜೂರಾದ ರೈತರು ಫಸಲ್ ಬಿಮಾ ಯೋಜನೆಯಡಿ:
ಬೆಳೆ ಸಾಲ ಮಂಜೂರಾದ ಎಲ್ಲ ರೈತರನ್ನು ಕಡ್ಡಾಯವಾಗಿ ಫಸಲ್ ಬಿಮಾ ಯೋಜನೆ ಯಡಿ ಒಳಪಡಿಸಲಾಗುವುದು. ಆದರೆ, ಬೆಳೆಸಾಲ ಪಡೆದ ರೈತರು ಈ ಯೋಜನೆಯಲ್ಲಿಭಾಗವಹಿಸಲು ಇಚ್ಛಿಸದಿದ್ದರೆ ಈ ಕುರಿತು ಸಂಬಂಧಿಸಿದ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಕ್ಕಿಂತ 7 ದಿನಗಳ ಮುಂಚಿತವಾಗಿ ಲಿಖಿತವಾಗಿ ನಿಗದಿತ ನಮೂನೆಯಲ್ಲಿಮುಚ್ಚಳಿಕೆ ಪತ್ರವನ್ನು ನೀಡಬೇಕು. ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯತ ಮಟ್ಟದ ಬೆಳೆಗಳಿಗೆ ಹಾಗೂ ಹೋಬಳಿ ಮಟ್ಟದ ಬೆಳೆಗಳಿಗೆ ಹತ್ತಿರದ ಬ್ಯಾಂಕುಗಳು ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಅಥವಾ ತಮ್ಮ ತಾಲೂಕಿನ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಬೆಂಗಳೂರಿನ ಯುನಿವರ್ಸಲ್ ಸೊಂಪು ಜನರಲ್ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ಕಂಪನಿಯ (ವಿಮಾ ಸಂಸ್ಥೆ) ಟೋಲ್ ಫ್ರೀ ಸಂಖ್ಯೆ: 18002005142 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು.