News

ರೈತರ ಅಭಿವೃದ್ಧಿಗೆ ಸರ್ಕಾರದ ಹೊಸ ಯೋಜನೆ, ಏನದು ?

19 December, 2023 2:46 PM IST By: Hitesh
ರೈತರಿಗೆ ಶುಭ ಸುದ್ದಿ ಕೊಟ್ಟ ಸರ್ಕಾರ
ಉತ್ತರ ಕರ್ನಾಟಕದ ಅಭಿವೃದ್ಧಿ ಹಾಗೂ ರೈತರಿಗೆ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ.

ಈಚೆಗೆ ಬೆಳಗಾವಿಯಲ್ಲಿ ಹಲವು ವಿಷಯಗಳು ಚರ್ಚೆ ನಡೆದಿದೆ. ಅದರಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರವೂ ಒಂದು ಪ್ರಮುಖವಾಗಿದೆ.

ರೈತರ ಅಭಿವೃದ್ಧಿ ಹಾಗೂ ರೈತರಿಗೆ ಉತ್ಸಾಹ ತುಂಬುವ ಯೋಜನೆಗಳ ಬಗ್ಗೆ ಹೆಚ್ಚು ಚರ್ಚೆಯಾಗಿದೆ.

ಅವುಗಳಲ್ಲಿ ಪ್ರಮುಖವಾಗಿ ಉತ್ತರ ಕರ್ನಾಟಕದ ರೈತರ ಅಭಿವೃದ್ಧಿ ಯೋಜನೆಗಳೂ ಇವೆ.  

ಧಾರವಾಡದಲ್ಲಿರುವ ವಾಲ್ಮಿಯನ್ನು [ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ] ಉನ್ನತೀಕರಿಸುವುದಾಗಿ ಸರ್ಕಾರ ಹೇಳಿದೆ.

ಅಲ್ಲದೇ  ಇದನ್ನು  “centre of excellence for water management” ಆಗಿ ಬದಲಾಯಿಸಲು ನಿರ್ಧರಿಸಲಾಗಿದೆ.

ಈ ಮೂಲಕ ಜಲ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ. ಈ ಸಂಸ್ಥೆಯ ಮೂಲಕ ಉತ್ತರ ಕರ್ನಾಟಕದ ಮಣ್ಣಿನ

ಸವುಳು- ಜವುಳು ಸಮಸ್ಯೆ ತಪ್ಪಲಿದೆ.   ರೈತರ ಆದಾಯ ಹೆಚ್ಚಳದ ಕಡೆಗೆ ಒತ್ತು ನೀಡಲಿದ್ದೇವೆ ಎಂದು ಹೇಳಿದ್ದಾರೆ ಸಿ.ಎಂ ಸಿದ್ದರಾಮಯ್ಯ.

ಉತ್ತರ ಕರ್ನಾಟಕದ ಅಭಿವೃದ್ಧಿ ನಮ್ಮ ಪ್ರಮುಖ ಆದ್ಯತೆಯಾಗಿದೆ.

ಅದರ ಈಡೇರಿಕೆಗಾಗಿ ನಾವು ಶಕ್ತಿಮೀರಿ ಶ್ರಮಿಸಲಿದ್ದೇವೆ.  

ರಾಯಚೂರಿನಲ್ಲಿ ಹತ್ತಿ ಪ್ರಮಾಣ ಹೆಚ್ಚಳ

ರಾಯಚೂರಿನಲ್ಲಿ ಹತ್ತಿ ಉತ್ಪಾದನೆಯ ಪ್ರಮಾಣ ಹೆಚ್ಚಾಗಿದೆ.  ಇದನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು.

ಅದರೊಂದಿಗೆ ಸ್ಥಳೀಯ ಆರ್ಥಿಕತೆ ಅಭಿವೃದ್ಧಿ ಹಾಗೂ ಉದ್ಯೋಗಾವಕಾಶಗಳ ಸೃಷ್ಟಿಸಲಾಗುವುದು.

ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಪ್ರಾದೇಶಿಕ ಅಸಮತೋಲನದಿಂದ ಹಿಂದುಳಿದಿರುವ ಉತ್ತರ ಕರ್ನಾಟಕಕ್ಕೆ ಧನಾತ್ಮಕ ಬದಲಾವಣೆ ತರುತ್ತೇವೆ.

ಈ ಭಾಗದ ಜಿಲ್ಲೆಗಳಲ್ಲಿ ಧನಾತ್ಮಕ ಬದಲಾವಣೆಯನ್ನು ತರಲು ಸರ್ಕಾರದ ಹೊಸ ಘೋಷಣೆ ಮಾಡಿದೆ.

ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸಲಾಗುವುದು. ಈ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲಾಗುವುದು.

ಸ್ಥಳೀಯರಿಗೆ ಉದ್ಯೋಗ ಒದಗಿಸುವ ಕ್ರಮ ತೆಗೆದುಕೊಳ್ಳುತ್ತೇವೆ.

ಬೆಳಗಾವಿ ಸಮೀಪದ 2,000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಲಾಗುವುದು.

500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಸ್ಥಾಪಿಸಲಾಗುವುದು.

ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದು ಹೇಳಿದ್ದಾರೆ.

ರೈತರ ಸಾಲ ಮನ್ನಾ ಮಾಡಿದ ಸರ್ಕಾರ  

ರೈತರ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲು ಸರ್ಕಾರ ಮುಂದಾಗಿದೆ.

ಭೀಕರ ಬರದಿಂದ ಬೆಳೆ ನಷ್ಟವಾಗಿ ನಾಡಿನ ಅನ್ನದಾತರು ಕಂಗಾಲಾಗಿದ್ದಾರೆ.

ಈ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸುವುದು ನಮ್ಮ ಆದ್ಯ ಕರ್ತವ್ಯವೆಂದು ಭಾವಿಸಿದ್ದೇವೆ.

ರೈತರ ಹಿತಕಾಪಾಡುವ ನಮ್ಮ ಪ್ರಯತ್ನವಾಗಿದೆ. ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ

ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲು ನಾವು ನಿರ್ಧರಿಸಿದ್ದೇವೆ

ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸರ್ಕಾರದ ಈ ನಿರ್ಧಾರದಿಂದ ಇದೀಗ ಲಕ್ಷಾಂತರ ರೈತರಿಗೆ ಸಹಾಯವಾಗಲಿದೆ.