News

ನಾಳೆ ನಾಡಿದ್ದು ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಹೇಗಿದೆ? ಇಲ್ಲಿದೆ ಹವಾಮಾನ ಇಲಾಖೆ ವರದಿ

01 August, 2023 5:36 PM IST By: KJ Staff
What Is the Rain forecast in karnataka for nexr 3 days

03 ನೇ ಆಗಸ್ಟ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ: ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬಿರುಗಾಳಿ ಮುನ್ನೆಚ್ಚರಿಕೆ :ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 45-55 ಕಿಮೀ ಇಂದ 65 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ. 03 ನೇ ಆಗಸ್ಟ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತು ಸುತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮ ಗಾಳಿ ಬೀಸುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.