1. ಸುದ್ದಿಗಳು

ಹವಾಮಾನ ವರದಿ: ನಾಳೆ ರಾಜ್ಯದ ಮಳೆ ಮುನ್ಸೂಚನೆ ಹೇಗಿದೆ?

Maltesh
Maltesh
what is the rain situation in karnataka tomorrow

16 ನೇ ಅಕ್ಟೋಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ; ಉತ್ತರ ಒಳನಾಡಿನಲ್ಲ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಉಷ್ಣಾಂಶಗಳ ಎಚ್ಚರಿಕೆ: ಇಲ್ಲ

ಗರಿಷ್ಠ ಉಷ್ಣಾಂಶಗಳು : ಇಲ್ಲ
ಭಾರೀ ಮಳೆ ಮುನ್ನೆಚ್ಚರಿಕೆ ಇಲ್ಲ
ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾದ್ಯತೆ ಇದೆ.

ಬಿರುಗಾಳಿಯ ಮುನೆಚರಿಕೆ:ಇಲ್ಲ
ಮೀನುಗಾರರಿಗೆ ಎಚ್ಚರಿಕೆ ಇಲ್ಲ
16ನೇ ಅಕ್ಟೋಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣರುತ್ತದೆ. ಗರಿಷ್ಟ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣರುತ್ತದೆ. ಹಗುರ ಮಳೆಯಾಗುವ ಸಾದ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರುವ ಬಹಳಷ್ಟು ಸಾಧ್ಯತೆ ಇದೆ.

Published On: 15 October 2023, 02:05 PM English Summary: what is the rain situation in karnataka tomorrow

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.