News

ಹವಾಮಾನ ವರದಿ: ರಾಜ್ಯದಲ್ಲಿ ಮಳೆಯ ಕುರಿತು ಹವಾಮಾನ ಇಲಾಖೆಯ ಮುನ್ಸೂಚನೆಯೇನು?

12 December, 2023 11:31 AM IST By: Maltesh
Weather Report

ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹಾಗೂ ಒಳನಾಡಿನಲ್ಲಿ ಒಣಹವೆಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಅಂದಾಜಿಸಿದೆ. ಇನ್ನು ಈ ವರದಿಯಲ್ಲಿ ಇಂದು ರಾಜ್ಯದ್ಯಂತ ಮಳೆ ಎಲ್ಲಿ ಆಗಲಿದೆ, ಹಾಗೂ ವಾತಾವರಣ ಹೇಹೆ ಇರಲಿದೆ ಎಂಬುದನ್ನು ಸಂಕ್ಷಿಪ್ತವಾಗಿ ನೋಡೋಣ.

ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 14.0 ಡಿ.ಸೆ. ವಿಜಯಪುರ ಮತ್ತು ಬೀದರ್ ನಲ್ಲಿ ದಾಖಲಾಗಿದೆ.

13 ನೇ ಡಿಸೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಗಂಟೆಗಳ ರಾಜ್ಯದ ಹವಾಮಾನ ವರದಿ

ಮುಂದಿನ 24 ಘಂಟೆಗಳು ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆಯ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯು ಈ ಅವಧಿಯಲ್ಲಿ ರಾಜ್ಯದ ಯಾವುದೇ ಭಾಗದಲ್ಲೂ ಗುಡುಗು ಮುನ್ನೆಚ್ಚರಿಕೆ ಯನ್ನು ನೀಡಿರುವುದಿಲ್ಲ. ಹಾಗೆ  ಮೀನುಗಾರರಿಗೆ ಕೂಡ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನು ನೀಡಿಲ್ಲ.

ಮುಂದಿನ 48 ಘಂಟೆಗಳು: ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆಯ ಸಾಧ್ಯತೆ ಇದೆ.ಭಾರಿ ಮಳೆ ಮುನೆಚರಿಕೆ: ಇಲ್ಲ ತಾಪಮಾನ ಎಚ್ಚರಿಕೆ: ಇಲ್ಲ

13 ನೇ ಡಿಸೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣಈ ಭಾಗಗಳಲ್ಲಿ ಕಂಡು ಬರುತ್ತದೆ. ಇನ್ನು ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಬಹಳಷ್ಟು ಮಂಜು ಕವಿಯುವ ಸಂಭವವಿದೆ ಇದೆ. ಇಲ್ಲಿ ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಮುಂದಿನ 48 ಗಂಟೆಗಳು: ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.