ರಾಜ್ಯದಲ್ಲಿ ಕನಿಷ್ಠ ತಾಪಮಾನದಲ್ಲಿ (ಚಳಿ) ಏರುಪೇರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜಪಾನ್‌ನೊಂದಿಗೆ ಐಎಎಫ್‌ನ ಜಂಟಿ ವಾಯು ರಕ್ಷಣಾ ಸಮರಾಭ್ಯಾಸ, 'ವೀರ್ ಗಾರ್ಡಿಯನ್ 2023ರ ವಿಶೇಷತೆ ಗೊತ್ತೆ ?
ರಾಜ್ಯಾದ್ಯಂತ ಒಣಹವೆ ಮುಂದುವರಿದಿದೆ. ಯಾವುದೇ ಭಾಗದಲ್ಲಿ ಮಳೆ ಆಗಿರುವುದು ವರದಿ ಆಗಿಲ್ಲ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ 2.1 ಡಿಗ್ರಿ ಸೆಲ್ಸಿಯಸ್‌ನಿಂದ 4 ಡಿಗ್ರಿ ಸೆಲ್ಸಿಯಸ್‌ನ ವರೆಗೆ ಇರಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಕಂಡುಬರುತ್ತಿಲ್ಲ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 11ಡಿಗ್ರಿ ಸೆಲ್ಸಿಯಸ್ ಬೀದರ್ ಹಾಗೂ ಮೈಸೂರಿನಲ್ಲಿ ದಾಖಲಾಗಿದೆ.
ಆಧಾರ್ ಕಾರ್ಡ್ ಇ-ಕೆವೈಸಿ ವಹಿವಾಟು ಪ್ರಮಾಣ 84.8 ಕೋಟಿಗೆ ಏರಿಕೆ!
ಮುಂದಿನ 24 ಗಂಟೆಗಳ ಕಾಲ ರಾಜ್ಯದಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ 3ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅಂದರೆ ಚಳಿ ಪ್ರಮಾಣವು ಈ ಸಂದರ್ಭದಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.
ಮುಂದಿನ 48ಗಂಟೆಗಳ ಅವಧಿಯಲ್ಲಿಯೂ ರಾಜ್ಯದಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ 3ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಉಳಿದಂತೆ ಯಾವುದೇ ಭಾಗದಲ್ಲಿ ಮಳೆ ಆಗುವ ಸಾಧ್ಯತೆಗಳಿಲ್ಲ. ಹೀಗಾಗಿ, ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆಯನ್ನು ನೀಡಿಲ್ಲ.
ರೈತರಿಗೆ ಬ್ಯಾಂಕ್ ಸಾಲದ ಮಿತಿ ಹೆಚ್ಚಿಸಲು ವೈಜ್ಞಾನಿಕ ವರದಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತವೆ. ಗರಿಷ್ಠ ಉಷ್ಣಾಂಶವು 29 ಮತ್ತು ಕನಿಷ್ಠ ಉಷ್ಣಾಂಶವು 15 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಗಳಿರುತ್ತವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.