ರಾಜ್ಯದಲ್ಲಿ ಇಂದು – ನಾಳೆ ಹವಾಮಾನ ಕೆಲವು ಕಡೆ ಬಿಸಿಲು ಹಾಗೂ ಇನ್ನೂ ಕೆಲವು ಕಡೆ (Rain) ಮಳೆ ಇದೆ.
ಗುರುವಾರ ಹಾಗೂ ಶುಕ್ರವಾರ ಕರಾವಳಿಯ ಕೆಲವು ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಅಲ್ಲದೇ ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ (Indian Meteorological Department forecast) ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಕಲಬರಗಿಯಲ್ಲಿ ದಾಖಲಾಗಿದೆ.
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 18.0 ಡಿ.ಸೆ. ವಿಜಯಪುರ & ಚಿಕ್ಕನಹಳ್ಳಿ ಯಲ್ಲಿ ದಾಖಲಾಗಿದೆ.
ಉಷ್ಣಾಂಶಗಳ ಎಚ್ಚರಿಕೆ:
ಗರಿಷ್ಠ ಉಷ್ಣಾಂಶಗಳು: ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗರಿಷ್ಠ (Maximum temperature)
ತಾಪಮಾನವು ಸಾಮಾನ್ಯಕ್ಕಿಂತ 1-2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಬೀದರ್, ಬೆಳಗಾವಿ, ಧಾರವಾಡ, ಕೊಪ್ಪಳ ಜಿಲ್ಲೆಗಳನ್ನು ಹೊರತುಪಡಿಸಿ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ
ಸಾಮಾನ್ಯಕ್ಕಿಂತ 2-3 ಡಿಗ್ರಿ; ಮತ್ತು ಚಿತ್ರದುರ್ಗ, ಹಾಸನ, ಮೈಸೂರು ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ
ಸಾಮಾನ್ಯಕ್ಕಿಂತ 1-2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ಮುಂದಿನ 48 ಗಂಟೆಗಳು: ಯಾವುದೇ ಗಮನಾರ್ಹ ಬದಲಾವಣೆ ಇಲ್ಲ
ಗುಡುಗು ಮುನ್ನೆಚ್ಚರಿಕೆ:
Thunderstorm Warning:
ಮುಂದಿನ 24 ಘಂಟೆಗಳು ಕರಾವಳಿಯ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆಯನ್ನು ನೀಡಿಲ್ಲ
ಗುರುವಾರ ಹಾಗೂ ಶುಕ್ರವಾರ ಹೇಗಿರಲಿದೆ ಹವಾಮಾನ
ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಸಂಜೆ/ರಾತ್ರಿಯ ವೇಳೆಗೆ ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಬಹಳಷ್ಟು ಸಾಧ್ಯತೆಗಳಿವೆ.
ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 48 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ
ಮಂಜು ಬಹಳಷ್ಟು ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು
ಸಾಧ್ಯತೆಗಳಿವೆ ಎಂದು (Meteorological Department Report) ಹವಾಮಾನ ಇಲಾಖೆ ವರದಿ ತಿಳಿಸಿದೆ.
ಕಳೆದ 24 ಗಂಟೆಯ ಅವಧಿಯಲ್ಲಿ ಹವಾಮಾನ ಹೇಗಿತ್ತು ?
ನೈಋತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಸಾಮಾನ್ಯವಾಗಿತ್ತು ಹಾಗೂ ಉತ್ತರ ಒಳನಾಡಿನ ದುರ್ಬಲವಾಗಿತ್ತು.
ಕರಾವಳಿಯ ಹಲವು ಕಡೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ; ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ (Heavy Rain) ಮಳೆಯಾಗಿದೆ.
ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಪುತ್ತೂರು (ದಕ್ಷಿಣ ಕನ್ನಡ ಜಿಲ್ಲೆ), ಎನ್ ಆರ್ ಪುರ (ಚಿಕ್ಕಮಗಳೂರು ಜಿಲ್ಲೆ), ಬೇಲೂರು (ಹಾಸನ ಜಿಲ್ಲೆ) ತಲಾ 3;
ಹಳಿಯಾಳ (ಉತ್ತರ ಕನ್ನಡ ಜಿಲ್ಲೆ), ಕಳಸ (ಚಿಕ್ಕಮಗಳೂರು ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ) ತಲಾ 2; ಗೇರ್ಸೊಪ್ಪ, ಕುಮಟಾ (ಎರಡೂ ಉತ್ತರ ಕನ್ನಡ ಜಿಲ್ಲೆ),
ಉಪ್ಪಿನಂಗಡಿ (ದಕ್ಷಿಣ ಕನ್ನಡ ಜಿಲ್ಲೆ), ಭಾಗಮಂಡಲ, ನಾಪೋಕ್ಲು, ಸೋಮವಾರಪೇಟೆ (ಎಲ್ಲಾ ಕೊಡಗು ಜಿಲ್ಲೆ), ಕಮ್ಮರಡಿ, ಕೊಪ್ಪ
ಜಯಪುರ (ಎಲ್ಲಾ ಚಿಕ್ಕಮಗಳೂರು ಜಿಲ್ಲೆ), ತಾಳಗುಪ್ಪ (ಶಿವಮೊಗ್ಗ ಜಿಲ್ಲೆ), (ಮೈಸೂರು, ಹುಣಸೂರು ಜಿಲ್ಲೆ) ತಲಾ 1 ಸೆಂ.ಮೀ
ಮಳೆಯಾಗಿರುವುದು ವರದಿಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Share your comments