1. ಸುದ್ದಿಗಳು

Karnataka Election 2023 “ಹಾವಿನ ಹೆಡೆಯ ಮೇಲಿನ ಕಪ್ಪೆ ಹಾರುವ ನೊಣಕ್ಕೆ ಆಶಿಸಿದಂತೆ” ವಚನ ಉಲ್ಲೇಖಿಸಿದ್ದೇಕೆ ಸಿದ್ದರಾಮಯ್ಯ?

Hitesh
Hitesh
ಸಿದ್ದರಾಮಯ್ಯ

“ಹಾವಿನ ಹೆಡೆಯ ಮೇಲಿನ ಕಪ್ಪೆ ಹಾರುವ ನೊಣಕ್ಕೆ ಆಶಿಸಿದಂತೆ” ಎಂಬ ಬಸವಣ್ಣನವರ ವಚನವನ್ನು ಉಲ್ಲೇಖಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.  

ಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ಶೆಟ್ಟರ್‌, ಸವದಿ ಸೋಲಿಸುವ ಹೊಣೆ ಯಡಿಯೂರಪ್ಪಗೆ ಎಂಬ ಶೀರ್ಷಕೆಯ ವರದಿಯನ್ನು ಸೇರಿಸಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಈ ಬಾರಿ ಲಿಂಗಾಯತರ ಸಮುದಾಯದ ಮತಗಳ ಬಗ್ಗೆ ಹೆಚ್ಚು ಚರ್ಚೆ ಆಗುತ್ತಿದೆ.

ಬಿಜೆಪಿ ನಾಯಕರಾಗಿದ್ದ ಜಗದೀಶ ಶೆಟ್ಟರ್‌ ಹಾಗೂ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್‌ ಸೇರ್ಪಡೆಯಾದ ನಂತರ ಚರ್ಚೆ ಬಿರುಸು ಪಡೆದುಕೊಂಡಿದೆ. 

ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.

“ರಾಜ್ಯ ಬಿಜೆಪಿಯಲ್ಲಿರುವ ಲಿಂಗಾಯತ ಸಮುದಾಯದ ನಾಯಕರನ್ನು ನೋಡಿದಾಗ

‘ ಹಾವಿನ ಹೆಡೆಯ ಮೇಲಿನ ಕಪ್ಪೆ  ಹಾರುವ ನೊಣಕ್ಕೆ ಆಶಿಸಿದಂತೆ… ಎಂಬ ಬಸವಣ್ಣನವರ ವಚನ ನೆನಪಾಗುತ್ತಿದೆ.

ರಾಜಕೀಯವಾಗಿ ತಮ್ಮನ್ನು ಮುಗಿಸಲು ಆರ್ ಎಸ್ ಎಸ್ ‘ವಿಘ್ನಸಂತೋಷಿ’ಗಳು ಮಾಡುತ್ತಿರುವ ಸಂಚನ್ನು ಅರಿಯದ ಬಿಜೆಪಿಯ ಲಿಂಗಾಯತ ನಾಯಕರು, 

ಕಾಂಗ್ರೆಸ್  ಪಕ್ಷ ಲಿಂಗಾಯತ ವಿರೋಧಿ ಎಂಬ ಸುಳ್ಳು ಆರೋಪ ಮಾಡುತ್ತಾ ಕಾಲ ಕಳೆಯುತ್ತಿರುವುದು ವಿಷಾದನೀಯ.

ರಾಜ್ಯದಲ್ಲಿ ನೆಲೆಯೇ ಇಲ್ಲದಿದ್ದ ಬಿಜೆಪಿಯನ್ನು ಅಧಿಕಾರದ ಪೀಠದಲ್ಲಿ ತಂದು ಕುಳ್ಳಿರಿಸಿದ ಲಿಂಗಾಯತ ನಾಯಕ ಬಿ.ಎಸ್.ಯಡಿಯೂರಪ್ಪನವರನ್ನು

ಜೈಲಿಗೆ ಕಳಿಸಿದ್ದು  ಆರ್ ಎಸ್ ಎಸ್ ನ ‘ವಿಘ್ನ ಸಂತೋಷಿ’ಗಳೇ ಹೊರತು, ಕಾಂಗ್ರೆಸ್ ಪಕ್ಷ ಅಲ್ಲ.

ಜಗದೀಶ್ ಶೆಟ್ಟರ ರಾಜಕೀಯ ಜೀವನವನ್ನು ಮುಗಿಸುವ ಹುನ್ನಾರದ ರೂವಾರಿಗಳು ಕೂಡಾ ಇದೇ ‘ವಿಘ್ನ ಸಂತೋಷಿ’ ಗಳು. ಕಾಂಗ್ರೆಸ್ ಅಲ್ಲ.

ಗೆಲ್ಲುವ ಅವಕಾಶವೇ ಇಲ್ಲದ ವರುಣಾ ಕ್ಷೇತ್ರದಲ್ಲಿ ಒಲ್ಲೆನೆಂದರೂ ಬಲಾತ್ಕಾರವಾಗಿ ವಿ.ಸೋಮಣ್ಣ ಎಂಬ ಲಿಂಗಾಯತ ನಾಯಕನನ್ನು

ಅಭ್ಯರ್ಥಿ ಮಾಡಿದ್ದು ಕೂಡಾ ಇದೇ ಆರ್ ಎಸ್ ಎಸ್ ‘ವಿಘ್ನ ಸಂತೋಷಿ’ಗಳು.

ಲಕ್ಷ್ಮಣ ಸವದಿ, ಸೊಗಡು ಶಿವಣ್ಣ, ಸಂಜಯ್ ಪಾಟೀಲ್ ಮೊದಲಾದ ಲಿಂಗಾಯತ ನಾಯಕರಿಗೆ ಟಿಕೆಟ್ ನಿರಾಕರಿಸಿ ಅವರನ್ನು

ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ್ದು ಕೂಡಾ ಇದೇ ಆರ್ ಎಸ್.ಎಸ್ ‘ವಿಘ್ನ ಸಂತೋಷಿ’ಗಳು.

 ಈಗ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವ ಹೊಣೆಯನ್ನು ಕೂಡಾ ಬಿ.ಎಸ್.ಯಡಿಯೂರಪ್ಪನವರ ಮೇಲೆ ಹೊರಿಸಲಾಗಿದೆ. 

Karnataka Election ಲಿಂಗಾಯತ ಸಮುದಾಯದ ಮತ ಸೆಳೆಯಲು ಪಕ್ಷಗಳ ಸರ್ಕಸ್‌: ಡ್ಯಾಮೇಜ್‌ ಕಂಟ್ರೋಲ್‌ಗೆ ಬಿಜೆಪಿ ಪ್ಲಾನ್‌ !

ಲಕ್ಷ್ಮಣ ಸವದಿ ಹಾಗೂ ಸಿದ್ದರಾಮಯ್ಯ

ಇವರಲ್ಲಿ ಯಾರೂ ಸೋತರೂ ಒಬ್ಬ ಲಿಂಗಾಯತ ನಾಯಕರು ಸೋತ ಹಾಗೆ ಅಲ್ಲವೇ?

ಆದರೆ ಬಿಜೆಪಿಯಲ್ಲಿರುವ ಲಿಂಗಾಯತ ನಾಯಕರು ತಮ್ಮ ನಿಜವಾದ ಶತ್ರುಗಳು ಯಾರೆಂದು ಅರ್ಥಮಾಡಿಕೊಳ್ಳದೆ,

ವೃಥಾ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ. ಇದು ಕೂಡಾ ಆರ್ ಎಸ್ ಎಸ್ ನ ‘ವಿಘ್ನ ಸಂತೋಷಿ’ಗಳ ಹುನ್ನಾರವೇ ಆಗಿದೆ

ಬದಲಾವಣೆಯ ಹೆಸರಲ್ಲಿ ಬಿಜೆಪಿಯೊಳಗಿನ ಆರ್ ಎಸ್ ಎಸ್ ‘ವಿಘ್ನ ಸಂತೋಷಿ’ಗಳು ಮಾಡುತ್ತಿರುವ ಈ

ಎಲ್ಲ ಪ್ರಯೋಗಗಳು ಅಂತಿಮವಾಗಿ ಪಕ್ಷದೊಳಗಿನ ಹಿರಿಯ ಮತ್ತು ಪ್ರಭಾವಿ ಲಿಂಗಾಯತ ನಾಯಕರ ತಲೆದಂಡ

ತೆಗೆದುಕೊಳ್ಳುವ ರಾಜಕೀಯ ಕುತಂತ್ರವೇ  ಆಗಿದೆ ಎನ್ನುವುದನ್ನು ಬಿಜೆಪಿಯೊಳಗಿನ

ಲಿಂಗಾಯತ ನಾಯಕರು ಮತ್ತು ಒಟ್ಟು ಲಿಂಗಾಯತ ಸಮುದಾಯ ಅರಿತುಕೊಳ್ಳಬೇಕಾಗಿದೆ.

ಈಗಲೂ ಕಾಲ ಮಿಂಚಿಲ್ಲ, ಬಿಜೆಪಿಯೊಳಗಿನ ಲಿಂಗಾಯತ ನಾಯಕರು ಕಲ್ಪಿತ ಶತ್ರುವಿನ ಮೇಲೆ ಆರೋಪ ಮಾಡುವುದನ್ನು ನಿಲ್ಲಿಸಿ ತಮ್ಮ

ನಿಜವಾದ ಶತ್ರುಗಳನ್ನು ಗುರುತಿಸಿ ಹೋರಾಟ ನಡೆಸಬೇಕೆಂದು ಮನವಿ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.

karnataka elections ಮುಂದೆಯೂ ಲಿಂಗಾಯತರಿಗೆ ಮುಖ್ಯಮಂತ್ರಿ ಸ್ಥಾನ; ಲಿಂಗಾಯತರನ್ನು ಬೆಳೆಸುತ್ತೇವೆ: ಬಿಜಿಪಿ!

Image And Additional Information: Siddaramaiah's official Facebook page 

Published On: 26 April 2023, 12:23 PM English Summary: Why did Siddaramaiah quote the verse, "As a frog on a snake's head hopes for a fly?"

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.