News

ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ

21 December, 2020 1:43 PM IST By:
cash

ಪದವಿ, ಸ್ನಾತಕೋತ್ತರ ಪದವಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಸಂತಸದ ಸುದ್ದಿ. ಈಗ ಉನ್ನತ ವ್ಯಾಸಂಗಕ್ಕಾಗಿ 7.5 ಲಕ್ಷ ರೂಪಾಯಿಯವರಿಗೆ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ ಸಿಗುತ್ತದೆ.

ಹೌದು, ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಇತರೆ ಯಾವುದೇ ಸಮಗ್ರ ಶಿಕ್ಷಣ ಕೋರ್ಸ್‌ಗಳ ವಿದ್ಯಾರ್ಥಿ ಗಳಿಗೆ ಗರಿಷ್ಠ 7.5ಲಕ್ಷದವರೆಗೆ ಬಡ್ಡಿರಹಿತ ಸಾಲ ಸಿಗಲಿದೆ. ಈ ಸೌಲಭ್ಯ ಪಡೆಯಲು ಯಾವುದೇ ಪೂರಕ ಭದ್ರತೆ (ಕೊಲ್ಯಾಟರಲ್‌ ಸೆಕ್ಯುರಿಟಿ) ಒದಗಿಸಬೇಕಾದ ಅಗತ್ಯವೂ ಇಲ್ಲ. ಮೂರನೇ ವ್ಯಕ್ತಿ ಯ ಭದ್ರತೆ ಒದಗಿಸಬೇಕಾಗಿಯೂ ಇಲ್ಲ. ಕೇಂದ್ರದ ಬಡ್ಡಿ ಸಬ್ಸಿಡಿ ಯೋಜನೆ (ಸಿಎಸ್‌ಐಎಸ್‌) ಅಡಿ ಈ ಸೌಲಭ್ಯ ದೊರೆಯಲಿದೆ.

ದೇಶದಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂತಾಗಿ ತಮ್ಮ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಾರೆ. ಬಡತನ ಕುಟುಂಬದಲ್ಲಿ ಜನಿಸಿದ ಮಕ್ಕಳಿಗೂ ಉನ್ನತ ವ್ಯಾಸಂಗ ಮಾಡಬೇಕೆಂಬ ಆಸೆಯಿರುತ್ತದೆ ಆದರೆ ಹಣಕಾಸಿನ ಸಮಸ್ಯೆಯಿಂದಾಗಿ ಆಸೆ ಅಲ್ಲಿ ಕಮರಿಹೋಗುತ್ತದೆ.

ಪದವಿ, ಸ್ನಾತಕ್ತೋತರ ಪದವಿ ಸೇರಿದಂತೆ ಇನ್ನಿತರ ಕೋರ್ಸ್ ಗಳನ್ನು ಮಾಡದೆ ಕೂಲಿಕೆಲಸದಲ್ಲಿ ತೊಡಗಿಕೊಳ್ಳುತ್ತಾರೆ. ಇದನ್ನೆಲ್ಲಾ ಗಮನಿಸಿ ಕೇಂದ್ರ ಸರ್ಕಾರ ಬಡತನ ಕುಟುಂಬದ ಮಕ್ಕಳಿಗೆ ಪ್ರೋತ್ಸಾಹಿಸಲು  ಬಡ್ಡಿರಹಿತ ಸಾಲಸೌಲಭ್ಯ ನೀಡುತ್ತದೆ.

ಇದನ್ನೂ ಓದಿ:ಜನವರಿ 1 ರಿಂದ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ತರಗತಿ ಆರಂಭ

ಇದಕ್ಕಿಂತ ಮುಂಚಿತವಗಿ ಸಾಲ ಕೊಡಲು ಕೆಲವು , ನ್ಯಾಕ್‌, ಎನ್‌ಬಿಐ, ಸಿಎಫ್‌ಟಿಐ ಮಾನ್ಯತೆ ಹೊಂದಿರುವ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿ ಗಳಿಗೆ ಮಾತ್ರ ಸಿಎಸ್‌ಐಎಸ್‌ ಅಡಿ ಈ ಸೌಲಭ್ಯ ಸಿಗುತ್ತಿತ್ತು ಮತ್ತು ಬಡ್ಡಿಯನ್ನೂ ವಿಧಿಸಲಾಗುತ್ತಿತ್ತು. ಇದನ್ನು ಪ್ರಶ್ನಿಸಿ ಡಾ. ರಾಮಮನೋಹರ ಲೋಹಿಯಾ ಚಿಂತಕರ ವೇದಿಕೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿತ್ತು. ‘ಯಾವುದೇ ತಾರತಮ್ಯ ಇಲ್ಲದೆ ಎಲ್ಲ ವಿದ್ಯಾರ್ಥಿಗಳಿಗೆ ಯೋಜನೆಯ ಪ್ರಯೋಜನವನ್ನು ವಿಸ್ತರಿಸಲಾಗುವುದು’ ಎಂದು ಕೇಂದ್ರಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಯಾರು ಅರ್ಹರು (Eligibility for Interest Subsidy) :

ಆರ್ಥಿಕವಾಗಿ ಹಿಂದುಳಿದಿರುವ, ಅಂದರೆ ಕುಟುಂಬದ ವಾರ್ಷಿಕ ಆದಾಯ 4.5ಲಕ್ಷಕ್ಕಿಂತ ಕಡಿಮೆ ಇರುವ ವಿದ್ಯಾರ್ಥಿಗಳು. ಕಾನೂನು, ಎಂಜಿನಿಯರಿಂಗ್‌, ನರ್ಸಿಂಗ್‌, ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ ಯಾವುದೇ ಕೋರ್ಸ್‌ ಮಾತ್ರವಲ್ಲದೆ, ಸಂಶೋಧನಾ ವಿದ್ಯಾರ್ಥಿಗಳೂ ಅರ್ಹರು.

ಅರ್ಜಿ ಸಲ್ಲಿಕೆ ಹೇಗೆ (How to apply):

ಕೆನರಾ ಬ್ಯಾಂಕ್‌ ಈ ಯೋಜನೆಯ ನೋಡಲ್‌ ಬ್ಯಾಂಕ್. ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕೋರ್ಸ್‌ಗೆ ಸಂಬಂಧಿಸಿದ ನಿಯಂತ್ರಣ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು. ಪ್ರಾಧಿಕಾರ ಅಥವಾ ಮಂಡಳಿ ಗಳು ಈ ಅರ್ಜಿಯನ್ನು ಪುರಸ್ಕರಿಸಿ ಸಂಬಂಧಿಸಿದ ಬ್ಯಾಂಕ್‌ಗಳಿಗೆ ಅರ್ಜಿಗಳನ್ನು ರವಾನಿಸುತ್ತವೆ ಮತ್ತು ವಿದ್ಯಾರ್ಥಿಗಳಿಗೆ ಅನುಮೋದನೆ ಪತ್ರ ನೀಡುತ್ತವೆ.