ವಿಜಯಪುರದ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಇಂಡಿ ಪಟ್ಟಣದಲ್ಲಿರುವ ಕೃಷಿ ವಿಜ್ಞಾನ ಕೇಂದ್ರ ಹಾಗೂ ಬೆಂಗಳೂರಿನ ಇಫ್ಕೋ ಲಿಮಿಟೆಡ್ ಸಹಭಾಗಗಿತ್ವದಲ್ಲಿ ಜೂನ್ 19ರಂದು ರೈತರಿಗೆ ಹಾಗೂ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಆನ್ ಲೈನ್ ತರಬೇತಿ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜೂನ್ 19ರ ಶನಿವಾರ ಬೆಳಗ್ಗೆ 11 ಗಂಟೆಯಿAದ ಕಾರ್ಯಕ್ರಮ ಆರಂಭವಾಗಲಿದ್ದು, ‘ನ್ಯಾನೊ ಯೂರಿಯಾ: ಪ್ರಾಮುಖ್ಯತೆ ಮತ್ತು ಬಳಕೆ’ ಎಂಬದು ಅಂತರ್ಜಾಲ ಕಾರ್ಯಾಗಾರ ಮತ್ತು ಸಂವಾದದ ವಿಷಯವಾಗಿದೆ. ವಿವಿಧ ಇಲಾಖೆ ಹಾಗೂ ಕೃಷಿ ವಿಜ್ಞಾನ ಕೇಂದ್ರಗಳ ತಜ್ಞರು, ವಿಜ್ಞಾನಿಗಳು ಹಾಗೂ ಕೃಷಿ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ರೈತರಿಗೆ ನ್ಯಾನೋ ಯೂರಿಯಾಗೆ ಸಂಬAಧಿಸಿದAತೆ ಅಗತ್ಯ ಮಾಹಿತಿ ನೀಡಲಿದ್ದಾರೆ.
ಯೂರಿಯಾಗೆ ಸಂಬAಧಪಟ್ಟAತೆ ನಡೆಯುತ್ತಿರುವ ಎಲ್ಲ ರೀತಿಯ ಅವ್ಯವಹಾರಗಳನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಈ ನಡುವೆ ಇತ್ತೀಚೆಗಷ್ಟೇ ಇಫ್ಕೋ ಕಂಪನಿಯು ದ್ರವ ರೂಪದ ನ್ಯಾನೋ ರಸಗೊಬ್ಬರ ಅಭಿವೃದ್ಧಿಪಡಿಸಿದ್ದು, ಪೂರ್ಣ ಪ್ರಮಾಣದಲ್ಲಿ ಮಾರುಕಟ್ಟೆಗೆ ಪರಿಚಯಿಸಲು ಎಲ್ಲ ರೀತಿಯ ತಯಾರಿ ನಡೆಸಿದೆ. ನ್ಯಾನೋ ಯೂರಿಯಾಗೆ ಸಂಬAಧಿಸಿದ ಸಂವಾದದಲ್ಲಿ ಭಾಗವಹಿಸಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರು, ನ್ಯಾನೋ ರಸಗೊಬ್ಬರವು ಕೃಷಿ ಕ್ಷೇತ್ರದಲ್ಲಿ ಆಗಿರುವ ಒಂದು ಕ್ರಾಂತಿಕಾರಿ ಸಂಶೋಧನೆ ಎಂದಿದ್ದರು. ಜೊತೆಗೆ, ಇಫ್ಕೋ ಸಂಸ್ಥೆ ತಯಾರಿಸಿರುವ ಅರ್ಧ ಲೀಟರ್ ನ್ಯಾನೋ ಯೂರಿಯಾ 45 ಕೆ.ಜಿ ಯೂರಿಯಾಗೆ (ಕಾಳು ಗೊಬ್ಬರ) ಸರಿಸಮನಾಗಿದೆ ಎಂದು ಸಚಿವರು ತಿಳಿಸಿದ್ದರು.
ಪ್ರಸ್ತುತ ಈ ಬಹು ಚರ್ಚಿತ ವಿಷಯವಾಗಿರುವ ನ್ಯಾನೋ ಯೂರಿಯಾದ ಮಹತ್ವ ಹಾಗೂ ಬಳಕೆ ಕುರಿತು ರೈತ ಬಾಂಧವರಿಗೆ ತಿಳಿಸಿಕೊಡುವ ಉದ್ದೇಶದಿಂದ ಈ ಸಂವಾದ ಹಮ್ಮಿಕೊಂಡಿದ್ದು, ವಿಜಯಪುರ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾಗಿರುವ ಡಾ.ರಾಜಶೇಖರ ವಿಲಿಯಮ್ಸ್ ಅವರು ಪ್ರಾಸ್ತಾವಿಕವಾಗಿ ಮಾತನಡುವರು. ಮುಖ್ಯ ಅತಿಥಿಗಳು ಹಾಗೂ ಉಪನ್ಯಾಸಕರಾಗಿ ವಿಜಯಪುರ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಸಹ ವಿಸ್ತರಣಾ ನಿರ್ದೇಶಕರಾಗಿರುವ ಡಾ.ಆರ್.ಬಿ.ಬೆಳ್ಳಿ, ಇಫ್ಕೋ ಸಂಸ್ಥೆಯ ಕರ್ನಾಟಕ ರಾಜ್ಯ ಮಾರಾಟ ವ್ಯವಸ್ಥಾಪಕರಾಗಿರುವ ಡಾ.ಸಿ.ನಾರಾಯಣ ಸ್ವಾಮಿ ಭಾಗವಹಿಸುವರು. ಇವರೊಂದಿಗೆ ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ಹಾಗೂ ಮುಖ್ಯಸ್ಥರಾದ ಕೆ.ಎಸ್.ಅಗಸನಾಳ ಉಪಸ್ಥಿತರಿರುವರು. ಉಪನ್ಯಾಸಕರಾಗಿ ಇಂಡಿ ಪಟ್ಟಣದಲ್ಲಿರುವ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ (ಐಸಿಎಂಆರ್) ಕೃಷಿ ವಿಜ್ಞಾನ ಕೇಂದ್ರದ ಮಖ್ಯಸ್ಥರು ಹಾಗೂ ಹಿರಿಯ ವಿಜ್ಞಾನಿ ಡಾ.ರಾಜೀವಕುಮಾರ ನೆಗಳೂರ ಅವರು ಭಾಗವಹಿಸವರು.
ಗೂಗಲ್ ಮೀಟ್ ವೇದಿಕೆಯಲ್ಲಿ ತರಬೇತಿ ಕಾರ್ಯಾಗಾರವು ನಡೆಯಲಿದ್ದು, ಆಸಕ್ತರು https://meet.google.com/cko-vcge-muh ಈ ಲಿಂಕ್ ಬಳಸಿಕೊಂಡು ಪಾಲ್ಗೊಳ್ಳಬಹುದು. ಈ ಕುರಿತು ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ಮೊ: 8088399399, 94480 90424, 8277933617 ಈ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಆಯೋಜಕರು ತಿಳಿಸಿದ್ದಾರೆ.
ಕಾರ್ಯಾಗಾರದಲ್ಲಿ ಭಾಗವಹಿಸಲು ಆಸಕ್ತಿ ಉಳ್ಳವರು ಮೊದಲು ತಮ್ಮ ಸ್ಮಾರ್ಟ್ ಫೋನ್‌ನಲ್ಲಿ ಗೂಗಲ್ ಮೀಟ್ ಅಪ್ಲಿಕೇಷನ್ (ಆ್ಯಪ್) ಅನ್ನು ಡೌನ್‌ಲೋಡ್ ಮಾಡಿಕೊಂಡು, ಬಳಿಕ ಮೇಲೆ ತಿಳಿಸಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ತರಬೇತಿಯಲ್ಲಿ ಭಾಗವಹಿಸಬಹುದು.
ಸೂಚನೆಗಳು: ಗೂಗಲ್ ಮೀಟ್ ವೇದಿಕೆಗೆ ಹಾಜರಾದ ಕೂಡಲೇ ಸದಸ್ಯರು ತಮ್ಮ ಆಡಿಯೋ ಮತ್ತು ವಿಡಿಯೋವನ್ನು ಮ್ಯೂಟ್ ಮಾಡಬೇಕು. ತರಬೇತಿ ಆರಂಭದಲ್ಲಿ ‘ಪ್ರಸೆಂಟ್ ನೌ’ ಮೇಲೆ ಕ್ಲಿಕ್ ಮಾಡದೆ, ‘ಆಸ್ಕ್ ಟು ಜಾಯಿನ್’ ಮೇಲೆ ಒತ್ತಬೇಕು ಎಂದು ಆಯೋಜಕರು ತಿಳಿಸಿದ್ದಾರೆ.
Share your comments