ರಾಜ್ಯದಲ್ಲಿ ವರುಣನ ಅಬ್ಬರ ಶುರುವಾಗಿದೆ. ಭಾರತೀಯ ಹವಾಮಾನ ಇಲಾಖೆ ಮೇ 31ರ ನಂತರ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳನ್ನು ಹೇಳಿದೆ. ಹೀಗಾಗಿ ಬರೋಬ್ಬರಿ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಮುಂದಿನ 24 ಘಂಟೆಗಳು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.
ತುಟ್ಟಿಭತ್ಯೆಯಲ್ಲಿ 8% ಹೆಚ್ಚಳ ಘೋಷಣೆ
ಗರಿಷ್ಠ ಉಷ್ಣಾಂಶದ ಮುನ್ಸೂಚನೆ ಮುಂದಿನ 48 ಘಂಟೆಗಳು ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ. 30 ನೇ ಮೇ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಮಳೆಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲೆ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
7 ನೇ ವೇತನ ಆಯೋಗ : ಸರ್ಕಾರದಿಂದ ಮಹತ್ವದ ಆದೇಶ
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಮಳೆಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲೆ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಇನ್ನು ಚಿಕ್ಕಬಳ್ಳಾಪುರ, ಬೆಂಗಳೂರು, ತುಮಕೂರು, ಮಂಡ್ಯ, ರಾಮನಗರ, ಚಾಮರಾಜನಗರ,ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.