ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹಾಗೂ ಪೂರ್ವವಲಯದ ಮೋಡಗಳ ಚಲನೆ ಹೆಚ್ಚಾಗಿದ್ದ ಪರಿಣಾಮ ಜ.8 ಮತ್ತು 9 ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳು ಸೇರಿದಂತೆ ಒಟ್ಟಾರೆ ಏಳು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿರುವುದರಿಂದ ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ 64.5 ಮೀ.ಮೀನಿಂದ 115. 5 ಮೀ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ವಿವಿಧೆಡೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜ.12ರ ವರೆಗೆ ಮಳೆಯಾಗುವ ಸಂಭವವಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಷಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಜ.8 ರವರೆಗೆ ಗುಡುಗು ಸಿಡಿಲಿನ ಮಳೆ ಸಾಧ್ಯತೆ
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ 64.5 ಮಿಲಿ ಮೀಟರ್‌ನಿಂದ 115.5 ಮಿಲಿ ಮೀಟರ್‌ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಗುರುವಾರ ಸಹ ಹಲವೆಡೆ ಮಳೆಯಾಗಿದೆ.