News

ಜುಲೈ 16 ರವರೆಗೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

12 July, 2020 12:33 PM IST By:
ಬಂಗಾಳಕೊಲ್ಲಿ

ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜು.12ರಿಂದ 16ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತುಮಕೂರುಶಿವಮೊಗ್ಗರಾಮನಗರಕೋಲಾರಕೊಡಗುಹಾಸನಚಿಕ್ಕಮಗಳೂರುಚಾಮರಾಜ ನಗರಬೆಂಗಳೂರು ನಗರಬೆಂಗಳೂರು ಗ್ರಾಮಾಂತರಉತ್ತರ ಕನ್ನಡದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾನುವಾರ ಗುಡುಗುಸಿಡಿಲು ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದುಈ ಎಲ್ಲ ಜಿಲ್ಲೆಗಳಲ್ಲಿ  'ಯೆಲ್ಲೊ ಅಲರ್ಟ್ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಮಳೆ ತಗ್ಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಇಳಿಮುಖವಾಗಿದ್ದು, ಬಿಸಿಲಿನ ವಾತಾವರಣ ಇದೆ. ಜಲಾಶಯಗಳಿಗೂ ನೀರಿನ ಒಳಹರಿವು ಕಡಿಮೆಯಾಗಿದೆ. ಕದ್ರಾ ಜಲಾಶಯಕ್ಕೆ ಶನಿವಾರ 19 ಸಾವಿರ ಕ್ಯೂಸೆಕ್, ಸೂಪಾ ಜಲಾಶಯಕ್ಕೆ 15610 ಕ್ಯೂಸೆಕೆ ನೀರು ಹರಿದು ಬರುತ್ತಿದೆ.

ಸೋಮವಾರದಿಂದ ಕರಾವಳಿ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಕರಾವಳಿಯಲ್ಲಿ ವೇಗವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.