News

ಜುಲೈ 17 ರವರೆಗೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

13 July, 2020 2:15 PM IST By:

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 13ರಿಂದ 17ರವರೆಗೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಕರಾವಳಿ ಭಾಗದ 7 ಜಿಲ್ಲೆಗಳಲ್ಲಿ ಯೆಲ್ಲಾ ಅಲರ್ಟ್ ಘೋಷಿಸಲಾಗಿದೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ.

 ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ಕಳೆದೆರಡು ದಿನಗಳಿಗೆ ಹೋಲಿಸಿದರೆ  ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದೆ  ಕೊಡಗು ಜಿಲ್ಲೆಯ
ಮಡಿಕೇರಿ, ತಲಕಾವೇರಿ, ಧಾರವಾಡ, ಗದಗ, ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಯಿತು.

ಆಲಮಟ್ಟಿ ಹೊರಹರಿವು ಹೆಚ್ಚಳ:

ಮಹಾರಾಷ್ಟ್ರ ಹಾಗೂ ಕೃಷ್ಣಾ ಮೇಲ್ದಂಡೆ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯದದಿಂದ ಭಾನುವಾರ ಬೆಳಗ್ಗೆಯಿಂದ 45 ಸಾವಿರ ಕ್ಯೂಸೆಕ್ ನೀರನ್ನು ಬಸವಸಾಗರ ಜಲಾಶಯಕ್ಕೆ ಬಿಡಲಾಗುತ್ತಿದೆ  ಜಲಾಶಯ ಭರ್ತಿಗೆ 2 ಮೀಟರ್‌ ಬಾಕಿ ಇದೆ. ಇದರಿಂದಾಗಿ ನಾರಾಯಣಪುರ (ಬಸವ ಸಾಗರ) ಜಲಾಶಯ ಬಹುತೇಕ ಭರ್ತಿಯಾಗಿದ್ದು, 30 ಟಿಎಂಸಿ ನೀರು ಸಂಗ್ರಹವಾಗಿದೆ.

ಭಾನುವಾರ ಮಧ್ಯಾಹ್ನ ಬಸವ ಸಾಗರದಿಂದ 22 ಸಾವಿರ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗಿದೆ. 45 ಸಾವಿರ ಕ್ಯೂಸೆಕ್ ಒಳಹರಿವು ಇದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಹೆಚ್ಚುವರಿ ನೀರನ್ನು ನದಿಗೆ ಹರಿಸಿದಲ್ಲಿ ಪ್ರವಾಹ ಸಾಧ್ಯತೆ ದಟ್ಟವಾಗಿದೆ. ಇದರಿಂದ ಹಲವು ನಡುಗಡ್ಡೆಗಳ ಸಂಪರ್ಕ ಕಡಿತಗೊಳ್ಳಲಿವೆ.