News

ರಾಜ್ಯದ ಎಂಟು ಜಿಲ್ಲೆಗಳಲ್ಲಿ ಇಂದು ನಾಳೆ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್

23 April, 2021 8:39 AM IST By:
rain alert

ಕರ್ನಾಟಕದ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿಯ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಏಪ್ರೀಲ್ 23 ಮತ್ತು 24 ರಂದು ರಾಜ್ಯದ ದಕ್ಷಿಣ ಒಳನಾಡು ಹಾಗೂ ಮಲೆನಾಡಿನ ವಿವಿಧೆಡೆ 64.5 ಮಿ.ಮೀ ನಿಂದ 115 ಮಿ.ಮೀರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ ಕೊಡಗು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿ,ಸಲಾಗಿದೆ.

ಹಾಗೆಯೇ  ರಾಜ್ಯದಲ್ಲಿ ಏಪ್ರಿಲ್ 26ರವರೆಗೂ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಚಿಜಯಪುರ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆ ಸುರಿಯಲಿದೆ

ದಕ್ಷಿಣ ಒಳನಾಡಿನ ಯಾವ ಪ್ರದೇಶದಲ್ಲಿ ಮಳೆ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ರಾಜ್ಯದ ಕೆಲವು ಕಡೆ ಗುರುವಾರ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆ ಸಾಯಂಕಾಲ ಉತ್ತಮ ಮಳೆಯಾಗಿದೆ. ಮೂಲ್ಕಿ ಬಳಿಯ ಬೊಳ್ಳೂರಿನ ಇಂದಿರಾ ನಗರದಲ್ಲಿ ಮಂಗಳವಾರ ಆಡುತ್ತಿದ್ದ ವೇಳೆ ಸಿಡಿಲಿನ ಆಘಾತಕ್ಕೊಳಗಾದ ಬಾಲಕ ಗಂಗಾವತಿ ಮೂಲದ ಮಾರುತೇಶ (6) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.ಘಟನೆಯಲ್ಲಿ ಗಾಯಗೊಂಡ ಇನ್ನೊರ್ವ ಬಾಲಕ ನಿಹಾನ್ (6) ಬುಧವಾರ ಮೃತಪಟ್ಟಿದ್ದಾನೆ.

ಬೆಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಚಿಕ್ಕಮಗಳೂರ, ಉಡುಪಿ ಜಿಲ್ಲೆಯ ಕೆಲವೆಡೆ ಉತ್ತಮ ಮಳೆ ಬಿದ್ದಿದೆ. ಕೊಡಗು ಜಿಲ್ಲೆಯಲ್ಲಿ 24 ಗಂಟೆ ಅವಧಿಯಲ್ಲಿ ಸರಾಸರಿ 16.97 ಮಿ.ಮೀ ಮಳೆಯಾಗಿದೆ.