ವಿಶ್ವದಾದ್ಯಂತ ಯೋಗ ತನ್ನದೇ ಆದ ಖ್ಯಾತಿಯನ್ನು ಗಳಿಸಿದೆ. ಇದೀಗ ಇದನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಾತ್ಮಕವಾಗಿಯೂ ರೂಪಿಸುವ ಕೆಲಸವಾಗುತ್ತಿದೆ.
Heavy Rain| ರಾಜ್ಯದ ವಿವಿಧೆಡೆ ಧಾರಾಕಾರ ಮಳೆ!
ಈಗಾಗಲೇ ಯೋಗವನ್ನು ವಿಶ್ವದ ಹಲವು ಭಾಗದಲ್ಲಿ ಆಚರಿಸಲಾಗುತ್ತಿದೆ. ಇದೀಗ ಯೋಗವನ್ನು ವಿಶ್ವದ ಪ್ರಸಿದ್ಧ ಸ್ಪರ್ಧೆಯಾದ
ಒಲಿಂಪಿಕ್ಸ್‌ನಲ್ಲಿ ಸೇರ್ಪಡೆ ಮಾಡಲು ಕಸರತ್ತುಗಳು ನಡೆದಿವೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುಳಿವು ನೀಡಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಯೋಗ
ಸೇರ್ಪಡೆಗೆ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
7th Pay Commission ಏಳನೇ ವೇತನ ಆಯೋಗ ರಚನೆಗೆ ಜಾಗ ನಿಗದಿ ಮಾಡಿ ಆದೇಶ!
ವಿಶ್ವ ಯೋಗ ದಿನವನ್ನು ವಿಶ್ವದ ಬಹುತೇಕ ಎಲ್ಲಾ ದೇಶಗಳಲ್ಲಿಯೂ ಆಚರಿಸುವ ಮೂಲಕ ಯೋಗಕ್ಕೆ ಗೌರವ ಮತ್ತು ವಿಶ್ವಮಾನ್ಯತೆ ನೀಡುತ್ತಿವೆ.
ಯೋಗ ಅತ್ಯಂತ ವೈಜ್ಞಾನಿಕವಾದ ವಿಧಾನವಾಗಿದ್ದು ರೋಗಗಳಿಂದ ಮುಕ್ತಿ ಪಡೆದು ಸದೃಢ ವ್ಯಕ್ತಿಗಳಾಗಲು ದಾರಿದೀಪವಾಗಿದೆ ಎಂದಿದ್ದಾರೆ.
ಯೋಗ ವಿಜ್ಞಾನ ಮತ್ತು ಆಧ್ಯಾತ್ಮಗಳ ಮಿಶ್ರಣವಾಗಿದೆ. ಹೀಗಾಗಿ, ಯೋಗದ ಮೂಲಕ ದೇಹ ಮತ್ತು ಮನಸ್ಸಿಗೆ ಹೊಸ ಚೈತನ್ಯ ಸಿಗಲು ಸಾಧ್ಯವಿದೆ.
ವ್ಯಕ್ತಿಯ ಚಾರಿತ್ರ್ಯ ನಿರ್ಮಾಣ ಮಾಡುವಲ್ಲಿ ಸ್ಫೂರ್ತಿ, ಶಿಸ್ತು ಮತ್ತು ಮೌಲ್ಯಯುತ ಜೀವನ ನಡೆಸಲು
ಅವಶ್ಯಕವಾದ ಶಕ್ತಿಯನ್ನು ಯೋಗದಲ್ಲಿ ಇದೆ ಎಂದು ಹೇಳಿದ್ದಾರೆ.
PMFBY | ಬೆಳೆ ಹಾನಿ: ರೈತರಿಗೆ ಫಸಲ್ ಭೀಮಾ ಯೋಜನೆಯಡಿ ₹1,25,662 ಕೋಟಿ ಪಾವತಿ! |Crop Insurance
ಮಾನವನ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಯೋಗ ಉಪಯುಕ್ತವಾಗಿದೆ. ಒತ್ತಡವನ್ನು ನಿರ್ವಹಿಸುವ ಶಕ್ತಿಯನ್ನು ನೀಡುತ್ತದೆ.
ಸಂಶೋಧನೆಗಳ ಪ್ರಕಾರ ಮನುಷ್ಯರು ಮೆದುಳಿನ ಶೇ 6ರಷ್ಟು ಸಾಮರ್ಥ್ಯವನ್ನು ಬಳಸುತ್ತಿದ್ದಾನೆ.
ವಿಶೇಷ ವ್ಯಕ್ತಿಗಳು ಶೇ 22ರಷ್ಟು ಮೆದುಳಿನ ಸಾಮರ್ಥ್ಯವನ್ನು ಬಳಸುತ್ತಿದ್ದಾರೆ. ಹಾಗಾಗಿ ಇನ್ನುಳಿದ ಶೇ 78ರಷ್ಟು ಸಾಮರ್ಥ್ಯವನ್ನು ಬಳಕೆಯಾಗುತ್ತಿಲ್ಲ.
ಯೋಗದ ಮೂಲಕ ಮೆದುಳಿನ ಬಳಕೆಯ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬಹುದು ಎಂಬುದು ಸಂಶೋಧನೆಗಳಿಂದ ಖಚಿತವಾಗಿದೆ ಎಂದು ಅವರು ಮಾಹಿತಿ ನೀಡಿದರು.
ಯೋಗ ವಿಶ್ವವಿದ್ಯಾಲಯದ ಕುಲಪತಿ ಡಾ.ಎಚ್.ಆರ್.ನಾಗೇಂದ್ರ, ಕಂದಾಯ ಸಚಿವ ಆರ್.ಅಶೋಕ್,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಬೆಂಗಳೂರು ದಕ್ಷಿಣ ವಿಧಾನಸಭಾ
ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.
Share your comments