News

ಮುಂದಿನ ವರ್ಷ ಯುವ ಬಜೆಟ್‌: ಯುವಕರ ಕೌಶಲ್ಯವೃದ್ಧಿಗೆ ಆದ್ಯತೆ

09 December, 2022 2:15 PM IST By: Hitesh
Youth budget next year: Priority for skill development of youth

ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ನಿರುದ್ಯೋಗವನ್ನು ನಿವಾರಿಸಲು, ಯುವಕರಲ್ಲಿ ಅಪೌಷ್ಟಿಕತೆ, ಮಾನಸಿಕ ಆರೋಗ್ಯ ಮತ್ತು ವ್ಯಸನದ ಸಮಸ್ಯೆಗಳನ್ನು ತಡೆಯುವ ನಿಟ್ಟಿನಲ್ಲಿ ಯುವಕರಿಗೆ ಕೌಶಲ್ಯ ತರಬಬೇತಿಯನ್ನು ನೀಡಲು ಉದ್ದೇಶಿಸಲಾಗಿದೆ.

ಇದಕ್ಕೆ ಯುವ ನೀತಿಯು ಒತ್ತು ನೀಡುತ್ತದೆ. ಪ್ರಥಮ ಬಾರಿಗೆ ಇಂತಹ ಸಮಗ್ರ ನೀತಿಯನ್ನು ರೂಪಿಸಲಾಗಿದೆ ಎಂದು ಯುವಜನ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದ್ದಾರೆ.  

ಯುವಕರು ಎದುರಿಸುತ್ತಿರುವ ಸಮಸ್ಯೆಗಳನ್ನು ತಪ್ಪಿಸುವ ಉದ್ದೇಶದಿಂದಲೇ ಈ ನೀತಿಯನ್ನು ಜಾರಿ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023ನೇ ಸಾಲಿನ ಬಜೆಟ್‌ನಲ್ಲಿ

ಯುವ ಬಜೆಟ್‌ ಮಂಡನೆ ಮಾಡಲಿದ್ದಾರೆ. ತಾಲ್ಲೂಕು ಮಟ್ಟದಲ್ಲಿ ಕಚೇರಿಗಳನ್ನು ಪ್ರಾರಂಭಿಸುವ ಮೂಲಕ ಯುವಕರಿಗಾಗಿ ಪ್ರತ್ಯೇಕ ನಿರ್ದೇಶನಾಲಯವನ್ನು ರಚಿಸುವಂತೆ ಕೋರಲಾಗಿದೆ ಎಂದರು.  

ರಾಜ್ಯದ ಏಳು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ: ಯಲ್ಲೋ ಅಲರ್ಟ್‌!

ಇನ್ನು ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಯುವಕರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ  ಕರ್ನಾಟಕ ಯುವ ನೀತಿಗೆ ರಾಜ್ಯ ಸಚಿವ ಸಂಪುಟವು ಅನುಮೋದನೆ ನೀಡಿದೆ.

ರಾಜ್ಯ ಸರ್ಕಾರವು ಅಕ್ಟೋಬರ್ 2021 ರಲ್ಲಿ 13 ಸದಸ್ಯರಿರುವ ತಜ್ಞರ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯು ಶಿಕ್ಷಣ, ತರಬೇತಿ, ಉದ್ಯೋಗ, ಉದ್ಯಮಶೀಲತೆ, ಆರೋಗ್ಯ ಮತ್ತು ಯೋಗಕ್ಷೇಮ,

ಕ್ರೀಡೆ ಮತ್ತು ಫಿಟ್‌ನೆಸ್, ಕಲೆ ಮತ್ತು ಸಂಸ್ಕೃತಿ ಹಾಗೂ ನಾಯಕತ್ವದ ಅಭಿವೃದ್ಧಿ ಸೇರಿದಂತೆ ವಿವಿಧ ಅಂಶಗಳನ್ನು ಒಳಗೊಂಡು 15 ರಿಂದ 29 ರ ವಯೋಮಾನದ ಯುವಕರಿಗೆ ಒತ್ತು ನೀಡಲಾಗಿದೆ.

ಮಾಂಡೌಸ್‌ ಚಂಡಮಾರುತ: ರಾಜ್ಯದ ವಿವಿಧ ಜಿಲ್ಲೆಯಲ್ಲಿ ಧಾರಾಕಾರ ಮಳೆ 

ಇದೀಗ ಸದ್ಯ ರಾಜ್ಯದಲ್ಲಿ ಪ್ರಸ್ತುತ 7.5 ಕೋಟಿ ಜನಸಂಖ್ಯೆಯಲ್ಲಿ ಶೇ.30ರಷ್ಟು (2.11 ಕೋಟಿ) ಯುವಕರೇ ಇದ್ದಾರೆ ಎಂದು ವರದಿಯಲ್ಲಿ ಬಹಿರಂಗವಾಗಿದೆ.

ಶಿಕ್ಷಣ, ಕ್ರೀಡೆ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಮತ್ತು ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಯುವಕರಿಗಾಗಿ 500ಕ್ಕೂ ಹೆಚ್ಚು ಯೋಜನೆಗಳನ್ನು ಮೀಸಲಿರಿಸಲಾಗಿದೆ.  

ಅಲ್ಲದೇ ರಾಜ್ಯದಲ್ಲಿ ಪ್ರೌಢಶಾಲಾ ಹಂತದಲ್ಲಿ ಶಾಲೆ ಬಿಡುವವರ ಪ್ರಮಾಣ ಹೆಚ್ಚಿದ್ದು, ಕೇವಲ ಶೇ 21ರಷ್ಟು ಯುವಕರು ಮಾತ್ರ ಪದವಿ ಮತ್ತು ಸ್ನಾತಕೋತ್ತರ ಹಂತ ತಲುಪುತ್ತಿದ್ದಾರೆ ಎನ್ನಲಾಗುತ್ತಿದೆ.