News

ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ 'ಸಿಹಿ ಸುದ್ದಿ'

21 February, 2019 9:11 PM IST By:
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಹೇಳಲಾಗಿದೆ.

ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 18 ರ ವರೆಗೆ ನಡೆಯಲಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.